ಭಾಗ್ಯದ ಲಕ್ಷ್ಮೀ ಬಾರಮ್ಮಾ

ಭಾಗ್ಯದ ಲಕ್ಷ್ಮೀ ಬಾರಮ್ಮಾ ನಮ್ಮಮ್ಮ ನೀ ಸೌ
ಭಾಗ್ಯದ ಲಕ್ಷ್ಮೀ ಬಾರಮ್ಮಾ || ಪ ||

ಹೆಜ್ಜಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆ ಕಾಲ್ಗಳ ಧ್ವನಿಯ ತೋರುತ
ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ || ೧ ||

ಕನಕ ವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೇ
ದಿನಕರ ಕೋಟಿ ತೇಜದಿ ಹೊಳೆವ ಜನಕರಾಯನ ಕುಮಾರಿ ಬೇಗ || ೨ ||

ಅತ್ತಿತ್ತಲಗದೆ ಭಕ್ತರ ಮನೆಯೊಳು ನಿತ್ಯ ಮಹೋತ್ಸವ ನಿತ್ಯ ಸುಮಂಗಳ
ಸತ್ಯವ ತೋರುವ ಸಾಧು ಸಜ್ಜನರ ಚಿತ್ತದಿ ಹೊಳೆವಾ ಪುತ್ತಳಿ ಬೊಂಬೆ || ೩ ||

ಸಂಖ್ಯೆ ಇಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜ ಲೋಚನೆ ವೆಂಕಟರಮಣನ ಬಿಂಕದ ರಾಣೀ || ೪ ||

ಸಕ್ಕರೆ ತುಪ್ಪದ ಕಾಲುವೆ ಹರಿಸಿ ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಅಳಗಿರಿ ರಂಗನ ಚೊಕ್ಕ ಪುರಂದರ ವಿಠಲನ ರಾಣೀ || ೫ ||

Leave a Reply

Your email address will not be published.